ಪ್ರಚಲಿತ ಘಟನೆಗಳು CA QUIZ GK JOB NEWS E-BOOK QUIZ TEST Geography History Indian Constitution MCQs
Latest UpdatesPOLICE EXAM

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ಇಟಿ, ಪಿಎಸ್‌ಟಿ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

Share With Friends

ಕರ್ನಾಟಕ ಪೊಲೀಸ್ ಇಲಾಖೆಯು ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ (ಹೈದರಾಬಾದ್ ಕರ್ನಾಟಕ ಮತ್ತು ನಾನ್ ಹೈದರಾಬಾದ್ ಕರ್ನಾಟಕ ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಹಿಷ್ಣುತಾ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ಲಿಖಿತ ಪರೀಕ್ಷೆ ಬರೆದು ಇಟಿ, ಪಿಎಸ್‌ಟಿ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳು ಕೆಎಸ್‌ಪಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಕರ್ನಾಟಕ ಪೊಲೀಸ್ ಇಲಾಖೆಯು 2007 ನಾನ್‌-ಹೈದೆರಾಬಾದ್‌ ಕರ್ನಾಟಕ ಮತ್ತು 558 ಹೈದೆರಾಬಾದ್ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಕಳೆದ ಮೇ ತಿಂಗಳಲ್ಲಿ ಅಧಿಸೂಚನೆ ಹೊರಡಿಸಿತ್ತು.

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ (ಪುರುಷ ಮತ್ತು ಮಹಿಳಾ) (2007+558) ಹುದ್ದೆಗಳ ಭರ್ತಿಗಾಗಿ ದಿನಾಂಕ 20-09-2020 ರಂದು ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಪ್ರಸ್ತುತ ಅಭ್ಯರ್ಥಿಗಳಿಗೆ ET, PST ಪರೀಕ್ಷೆ ನಡೆಸಲಿದ್ದು, ಪ್ರವೇಶ ಪತ್ರದಲ್ಲಿ ನೀಡಲಾದ ದಿನಾಂಕದಂದು ಅಗತ್ಯ ದಾಖಲೆಗಳೊಂದಿಗೆ ತಪ್ಪದೇ ಹಾಜರಾಗಲು ಸೂಚಿಸಲಾಗಿದೆ.

# ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳುವುದು ಹೇಗೆ..?
ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳಲು ಈ ಮುಂದಿನ ಲಿಂಕ್ ಗೆ ಭೇಟಿ ನೀಡಿ ‌ http://cpcnhk20.ksp-online.in/ ಗೆ ಭೇಟಿ ನೀಡಿ. ನಂತರ ಪೇಜ್‌ನಲ್ಲಿ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ ನಿಮ್ಮ ಪ್ರವೇಶ ಪತ್ರ ಪಡೆದುಕೊಳ್ಳಬಹುದಾಗಿದೆ.

Leave a Reply

Your email address will not be published. Required fields are marked *

error: Content Copyright protected !!