ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 34 ರಿಂದ 38ಕ್ಕೆ ಏರಿಸಲು ಕೇಂದ್ರ ಸಂಪುಟ ಅನುಮೋದನೆ
ಮೇ 5, 2026 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳ ಸಂಖ್ಯೆಯನ್ನು 4ರಿಂದ ಹೆಚ್ಚಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ಪ್ರಸ್ತುತ 34 ನ್ಯಾಯಮೂರ್ತಿಗಳಿರುವ ನ್ಯಾಯಾಲಯದ ಸಾಮರ್ಥ್ಯವನ್ನು 38ಕ್ಕೆ (ಮುಖ್ಯ ನ್ಯಾಯಮೂರ್ತಿಯನ್ನು ಒಳಗೊಂಡಂತೆ) ಹೆಚ್ಚಿಸಲು ನಿರ್ಧರಿಸಲಾಗಿದೆ. ಈ ತಿದ್ದುಪಡಿ ಮಸೂದೆಯನ್ನು ಶೀಘ್ರದಲ್ಲೇ ಸಂಸತ್ತಿನಲ್ಲಿ ಮಂಡಿಸಲಾಗುವುದು.
ಈ ಸಂಬಂಧ ಸರ್ವೋಚ್ಚ ನ್ಯಾಯಾಲಯ (ನ್ಯಾಯಮೂರ್ತಿಗಳ ಸಂಖ್ಯೆ) ತಿದ್ದುಪಡಿ ಮಸೂದೆ, 2026ನ್ನು ಸಂಸತ್ತಿನಲ್ಲಿ ಮಂಡಿಸಲಾಗುತ್ತದೆ. ಇದರಿಂದ 1956ರ ಮೂಲ ಕಾಯ್ದೆಯಲ್ಲಿ ತಿದ್ದುಪಡಿ ಮಾಡಿ ನ್ಯಾಯಮೂರ್ತಿಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತದೆ.
ಪ್ರಸ್ತುತ ಸರ್ವೋಚ್ಚ ನ್ಯಾಯಾಲಯದ ಮಂಜೂರಾದ ನ್ಯಾಯಮೂರ್ತಿಗಳ ಸಂಖ್ಯೆ 34 (ಮುಖ್ಯ ನ್ಯಾಯಮೂರ್ತಿಯನ್ನು ಸೇರಿ) ಆಗಿದ್ದು, ಪ್ರಕರಣಗಳ ಹೆಚ್ಚುತ್ತಿರುವ ಹೊರೆ ಗಮನದಲ್ಲಿಟ್ಟುಕೊಂಡು ಈ ಹೆಚ್ಚಳಕ್ಕೆ ಮುಂದಾಗಲಾಗಿದೆ. ಈ ಕ್ರಮದಿಂದ ನ್ಯಾಯಾಂಗದ ಕಾರ್ಯಕ್ಷಮತೆ ಹೆಚ್ಚಿ, ಪ್ರಕರಣಗಳ ವೇಗವಾದ ವಿಲೇವಾರಿ ಸಾಧ್ಯವಾಗಲಿದೆ ಎಂದು ಸರ್ಕಾರ ತಿಳಿಸಿದೆ.
ನ್ಯಾಯಮೂರ್ತಿಗಳ ಸಂಖ್ಯೆ ಹೆಚ್ಚಳ ಪ್ರಕ್ರಿಯೆ ಏನು..?
ನ್ಯಾಯಮೂರ್ತಿಗಳ ಸಂಖ್ಯೆಯನ್ನು ಹೆಚ್ಚಿಸುವ ಪ್ರಕ್ರಿಯೆ ಮುಖ್ಯ ನ್ಯಾಯಮೂರ್ತಿಯ ಶಿಫಾರಸ್ಸಿನ ಆಧಾರದ ಮೇಲೆ ನಡೆಯುತ್ತದೆ. ಮುಖ್ಯ ನ್ಯಾಯಮೂರ್ತಿ ಕೇಂದ್ರ ಕಾನೂನು ಸಚಿವರಿಗೆ ಪತ್ರ ಬರೆದು ಶಿಫಾರಸು ಸಲ್ಲಿಸುತ್ತಾರೆ. ನಂತರ ಹಣಕಾಸು ಸಚಿವಾಲಯದೊಂದಿಗೆ ಸಮಾಲೋಚನೆ ನಡೆಸಿದ ಬಳಿಕ, ಕಾನೂನು ಸಚಿವಾಲಯದ ನ್ಯಾಯ ಇಲಾಖೆ ಮಸೂದೆ ರೂಪಿಸಿ ಸಚಿವ ಸಂಪುಟಕ್ಕೆ ಸಲ್ಲಿಸುತ್ತದೆ. ಈ ಹೆಚ್ಚುವರಿ ನ್ಯಾಯಮೂರ್ತಿಗಳ ವೇತನ ಹಾಗೂ ಸಂಬಂಧಿತ ವೆಚ್ಚಗಳನ್ನು ಭಾರತದ ಸಂಯುಕ್ತ ನಿಧಿಯಿಂದ ಭರಿಸಲಾಗುತ್ತದೆ.
ಇದನ್ನೂ ಓದಿ : ಭಾರತದಲ್ಲಿ ಸುಪ್ರೀಂ ಕೋರ್ಟ್ ಕೊಲಿಜಿಯಂ ವ್ಯವಸ್ಥೆ ಎಂದರೇನು? (Supreme Court Collegium System)
ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳ ಸಂಖ್ಯೆಯ ಇತಿಹಾಸ :
ಭಾರತದ ಸಂವಿಧಾನದ ವಿಧಿ 124 ಪ್ರಕಾರ, ಸರ್ವೋಚ್ಚ ನ್ಯಾಯಾಲಯವು ಮುಖ್ಯ ನ್ಯಾಯಮೂರ್ತಿ ಹಾಗೂ ಸಂಸತ್ತಿನಿಂದ ನಿರ್ಧರಿಸಲ್ಪಡುವ ಇತರ ನ್ಯಾಯಮೂರ್ತಿಗಳನ್ನು ಒಳಗೊಂಡಿರುತ್ತದೆ. 1956ರಲ್ಲಿ ಪ್ರಾರಂಭಿಕವಾಗಿ 10 ನ್ಯಾಯಮೂರ್ತಿಗಳ ಮಿತಿಯನ್ನು ನಿಗದಿಪಡಿಸಲಾಗಿತ್ತು. ನಂತರ ಅವಶ್ಯಕತೆ ಅನುಸಾರ ಹಲವು ಹಂತಗಳಲ್ಲಿ ಹೆಚ್ಚಳ ಮಾಡಲಾಗಿದೆ.
In Short : ನ್ಯಾಯಮೂರ್ತಿಗಳ ಸಂಖ್ಯೆ ಹೆಚ್ಚಿಸುವ ಪ್ರಕ್ರಿಯೆ
*ನ್ಯಾಯಮೂರ್ತಿಗಳ ಸಂಖ್ಯೆ ಹೆಚ್ಚಿಸುವ ಪ್ರಕ್ರಿಯೆ:
*ಮುಖ್ಯ ನ್ಯಾಯಮೂರ್ತಿ ಶಿಫಾರಸು ಸಲ್ಲಿಸುತ್ತಾರೆ
*ಕಾನೂನು ಸಚಿವಾಲಯಕ್ಕೆ ಪತ್ರ ಕಳುಹಿಸಲಾಗುತ್ತದೆ
*ಹಣಕಾಸು ಸಚಿವಾಲಯದೊಂದಿಗೆ ಸಮಾಲೋಚನೆ
*ನ್ಯಾಯ ಇಲಾಖೆ ಮಸೂದೆ ರೂಪಿಸಿ ಸಚಿವ ಸಂಪುಟಕ್ಕೆ ಸಲ್ಲಿಕೆ
*ಬಳಿಕ ಸಂಸತ್ತಿನಲ್ಲಿ ಮಸೂದೆ ಮಂಡನೆ
| ಇದನ್ನೂ ಓದಿ : ಭಾರತದ ಮೊದಲ ಸಂಪೂರ್ಣ ಪೇಪರ್‌ಲೆಸ್ ನ್ಯಾಯಾಂಗ (First Paperless Judiciary) ಹೊಂದಿದ ರಾಜ್ಯದಾದ ಸಿಕ್ಕಿಂ |
ಐತಿಹಾಸಿಕ ಹಿನ್ನೆಲೆ ಮತ್ತು ಬೆಳವಣಿಗೆ:
ಭಾರತದ ಸಂವಿಧಾನದ ವಿಧಿ 124(1) ರ ಪ್ರಕಾರ, ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ಸಂಖ್ಯೆಯನ್ನು ನಿರ್ಧರಿಸುವ ಅಧಿಕಾರ ಸಂಸತ್ತಿಗೆ ಇದೆ. ಕಾಲಕಾಲಕ್ಕೆ ಈ ಸಂಖ್ಯೆಯನ್ನು ಈ ಕೆಳಗಿನಂತೆ ಹೆಚ್ಚಿಸಲಾಗಿದೆ.
NOTES :
*ಹೊಸ ಸಂಖ್ಯಾಬಲ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆಯು ಪ್ರಸ್ತುತ ಇರುವ 33 ರಿಂದ 37ಕ್ಕೆ ಏರಿಕೆಯಾಗಲಿದೆ (ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಹೊರತುಪಡಿಸಿ).
*ಒಟ್ಟು ಬಲ: ಮುಖ್ಯ ನ್ಯಾಯಮೂರ್ತಿಗಳನ್ನು (CJI) ಒಳಗೊಂಡಂತೆ ಸುಪ್ರೀಂ ಕೋರ್ಟ್‌ನ ಒಟ್ಟು ನ್ಯಾಯಾಧೀಶರ ಸಂಖ್ಯೆ 34 ರಿಂದ 38ಕ್ಕೆ ಏರಲಿದೆ.
*ಉದ್ದೇಶ: ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಲಕ್ಷಾಂತರ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಮತ್ತು ಸಾಂವಿಧಾನಿಕ ಪೀಠಗಳ ರಚನೆಗೆ ಅನುಕೂಲ ಮಾಡಿಕೊಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
*ತಿದ್ದುಪಡಿ : ಈ ಸಂಬಂಧ ಸರ್ವೋಚ್ಚ ನ್ಯಾಯಾಲಯ (ನ್ಯಾಯಮೂರ್ತಿಗಳ ಸಂಖ್ಯೆ) ತಿದ್ದುಪಡಿ ಮಸೂದೆ, 2026 ಅನ್ನು ಶೀಘ್ರದಲ್ಲೇ ಸಂಸತ್ತಿನಲ್ಲಿ ಮಂಡಿಸಲಾಗುತ್ತದೆ. ಇದು 1956ರ ಮೂಲ ಕಾಯ್ದೆಗೆ ತಿದ್ದುಪಡಿ ಮಾಡುತ್ತದೆ
#SupremeCourt,

