ಬಿಹಾರದ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆಗೆ ಸುಪ್ರೀಂ ಕೋರ್ಟ್ ಮಾನ್ಯತೆ
ಬಿಹಾರದಲ್ಲಿ ಚುನಾವಣಾ ಆಯೋಗ ನಡೆಸಿದ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯ ಕಾನೂನುಬದ್ಧತೆ ಮತ್ತು ಸಂವಿಧಾನಬದ್ಧತೆಯನ್ನು ಭಾರತದ ಸುಪ್ರೀಂ ಕೋರ್ಟ್ ಮಾನ್ಯಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ಈ ಮಹತ್ವದ ತೀರ್ಪು ನೀಡಿದೆ.
ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ, ಭಾರತೀಯ ಚುನಾವಣಾ ಆಯೋಗವು ಸಂವಿಧಾನದ Article 324 ಅಡಿಯಲ್ಲಿ Special Intensive Revision ನಡೆಸುವ ಅಧಿಕಾರ ಹೊಂದಿದೆ ಎಂದು ಸ್ಪಷ್ಟಪಡಿಸಿದೆ. ಜೊತೆಗೆ, Representation of the People Act, 1950ರ Section 21(3) ಅನ್ನು Article 324 ಜೊತೆಗೆ ಓದಬೇಕು ಎಂದು ನ್ಯಾಯಾಲಯ ಹೇಳಿದೆ.
Article 324 ಪ್ರಕಾರ ಚುನಾವಣೆಯ ಮೇಲ್ವಿಚಾರಣೆ, ನಿರ್ದೇಶನ ಹಾಗೂ ನಿಯಂತ್ರಣದ ಅಧಿಕಾರ ಚುನಾವಣಾ ಆಯೋಗಕ್ಕೆ ನೀಡಲಾಗಿದೆ. Representation of the People Act, 1950ರ Section 21 ಮತದಾರರ ಪಟ್ಟಿಯ ಸಿದ್ಧತೆ ಮತ್ತು ಪರಿಷ್ಕರಣೆಗೆ ಸಂಬಂಧಿಸಿದೆ.
ಇದನ್ನೂ ಓದಿ : ಜನಸಂಖ್ಯಾ ಬದಲಾವಣೆ (Demography Changes) ಅಧ್ಯಯನಕ್ಕೆ ಉನ್ನತ ಮಟ್ಟದ ಸಮಿತಿ ರಚನೆ
ಚುನಾವಣಾ ಉದ್ದೇಶಗಳಿಗಾಗಿ ನಾಗರಿಕತ್ವಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಚುನಾವಣಾ ಆಯೋಗ ಪರಿಶೀಲಿಸಬಹುದು ಎಂದು ನ್ಯಾಯಾಲಯ ಹೇಳಿದೆ. ಆದರೆ ಅಂತಿಮವಾಗಿ ನಾಗರಿಕತ್ವದ ನಿರ್ಧಾರ ಕೈಗೊಳ್ಳುವ ಅಧಿಕಾರ Citizenship Act ಅಡಿಯಲ್ಲಿ ಕಾರ್ಯನಿರ್ವಹಿಸುವ ಸಮರ್ಥ ಪ್ರಾಧಿಕಾರಗಳಿಗೆ ಮಾತ್ರ ಸೇರಿದೆ ಎಂದು ಸ್ಪಷ್ಟಪಡಿಸಿದೆ.
2003ರ ಮತದಾರರ ಪಟ್ಟಿಯಿಂದ ಅನಾಗರಿಕತ್ವದ ಆಧಾರದ ಮೇಲೆ ಹೆಸರುಗಳನ್ನು ತೆಗೆದುಹಾಕಿದ ಪ್ರಕರಣಗಳನ್ನು ನಾಲ್ಕು ವಾರಗಳೊಳಗೆ ಸಂಬಂಧಿತ ಪ್ರಾಧಿಕಾರಕ್ಕೆ ಕಳುಹಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ವ್ಯಕ್ತಿ ಭಾರತೀಯ ನಾಗರಿಕನೆಂದು ದೃಢಪಟ್ಟರೆ, ಅವರ ಹೆಸರನ್ನು ಮರುಸ್ಥಾಪಿಸಬೇಕು ಎಂದೂ ನ್ಯಾಯಾಲಯ ಹೇಳಿದೆ.
ಇತರೆ ರಾಜ್ಯಗಳಲ್ಲೂ SIR :
ಬಿಹಾರ ಮಾತ್ರವಲ್ಲದೆ ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳದಲ್ಲಿಯೂ Special Intensive Revision ಪ್ರಕ್ರಿಯೆ ನಡೆಸಲಾಗಿತ್ತು. ವೇಗವಾದ ನಗರೀಕರಣ, ವಲಸೆ, ನಕಲಿ ನೋಂದಣಿಗಳು ಹಾಗೂ ದೀರ್ಘ ಅವಧಿಯಿಂದ ಸಮಗ್ರ ಪರಿಷ್ಕರಣೆ ನಡೆದಿರದ ಹಿನ್ನೆಲೆಯಲ್ಲಿ ಈ ಅಭಿಯಾನ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.
| ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಎಂದರೇನು? Special Intensive Revision (SIR) ಎನ್ನುವುದು ಚುನಾವಣಾ ಆಯೋಗ ನಡೆಸುವ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಾಗಿದೆ. ಬಿಹಾರದಲ್ಲಿ ನಡೆದ ಈ ಅಭಿಯಾನದಲ್ಲಿ ಸುಮಾರು 7.9 ಕೋಟಿ ನೋಂದಾಯಿತ ಮತದಾರರನ್ನು ಪರಿಶೀಲಿಸಲಾಗಿದ್ದು, ಅಂತಿಮವಾಗಿ 7.42 ಕೋಟಿ ಮತದಾರರನ್ನು ಒಳಗೊಂಡ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಯಿತು. |

